ರಾಜ್ಯ

8,500 ಜಪ್ತಿ ವಾಹನಗಳ ಸ್ಧಳಾಂತರ ; 15ರಿಂದ 20 ದಿನಗಳೊಳಗೆ ಸೂಚನೆ

ಬೆಂಗಳೂರು: ಹಲವು ವರ್ಷಗಳಿಂದ ಪೊಲೀಸ್ ಠಾಣೆಗಳ ಆವರಣದಲ್ಲಿ ನಿಂತಿರುವ 8,500 ಜಪ್ತಿ ವಾಹನಗಳನ್ನು ಶೀಘ್ರದಲ್ಲೇ ಬೇರೆಡೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಲಾಗಿದೆ.

ಪೊಲೀಸ್ ಠಾಣೆಗಳ ಆವರಣ, ರಸ್ತೆಗಳು ಮತ್ತು ಕಾಲುದಾರಿಗಳನ್ನು ಮುಕ್ತಗೊಳಿಸುವ ಉದ್ದೇಶದಿಂದ ಕಂದಾಯ ಇಲಾಖೆ ಜಾಗ ಗುರುತಿಸಿದೆ.

ಈ ಕುರಿತು ಮಾತನಾಡಿದ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣಬೈರೇಗೌಡ, ಕಂದಾಯ ಮತ್ತು ಪೊಲೀಸ್ ಇಲಾಖೆಗಳು ಜಂಟಿಯಾಗಿ ಕಾರ್ಯನಿರ್ವಹಿಸಿ ಸಮಸ್ಯೆ ಬಗೆಹರಿಸಲು ಮುಂದಾಗಿವೆ ಎಂದು ತಿಳಿಸಿದರು.

ಹಲವು ವಾಹನಗಳ ಪ್ರಕರಣಗಳು ನ್ಯಾಯಾಲಯದಲ್ಲಿರುವುದರಿಂದ ಅವುಗಳನ್ನು ವಿಲೇವಾರಿ ಮಾಡಲು ಸಾಧ್ಯವಾಗುತ್ತಿಲ್ಲ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.

ಮುಂದಿನ 15ರಿಂದ 20 ದಿನಗಳೊಳಗೆ ಎಲ್ಲಾ 8,500 ವಾಹನಗಳನ್ನು ಪೊಲೀಸ್ ಇಲಾಖೆ ಗುರುತಿಸುವ ನಿಗದಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುವುದು ಎಂದು ಸಚಿವರು ತಿಳಿಸಿದರು.

Leave a Reply

Your email address will not be published. Required fields are marked *